ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ಸಪ್ತ ದಿನ ಶಿಬಿರದ ಯಶಸ್ಸಿಗೆ ಹಗಳಿರುಲ್ಲೆನ್ನದೆ ಶ್ರಮಿಸಿದ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕ ಯೋಜನಾಧಿಕಾರಿ ಸುರೇಶ್ ಕೆ. ಎಂ. ಅವರನ್ನು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನಾರಂಪಾಡಿ ಘಟಕದ ವತಿಯಿಂದ ಸನ್ಮಾನಿಸಲಾಯಿತು.
ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ನಾರಂಪಾಡಿ ಘಟಕದ ಕಾರ್ಯದರ್ಶಿ ಶ್ರೀಧರ್ ಪದ್ಮಾರ್ ಶಾಲು ಹೊದಿಸಿ ಅಭಿನಂದಿಸಿದರು. ಕೆವಿವಿಇಎಸ್ ನ ಜತೆ ಕಾರ್ಯದರ್ಶಿ ಗೋಪಾಲ ಕೃಷ್ಣ ಉಪ್ಪಂಗಳ ಹಣ್ಣು ಹಂಪಲು ನೀಡಿ ಗೌರವಿಸಿದರು. ಶ್ರೀ ಗೋಪಾಲಕೃಷ್ಣ ಭಜನಾ ಮಂದಿರ ಅಗಲ್ಪಾಡಿ, ಜಯನಗರ ಇದರ ಪ್ರಧಾನ ಕಾರ್ಯದರ್ಶಿ ರಮೇಶ್ ಕೃಷ್ಣ ಪದ್ಮಾರ್ ಉಪಸ್ಥಿತರಿದ್ದರು.