ಪೆರ್ಲ ನಾಲಂದ ಕಾಲೇಜು ಆರ್ಟ್ಸ್ ಮತ್ತು ಸೈನ್ಸ್, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಆಶ್ರಯದಲ್ಲಿ ಕಣ್ಣೂರು ವಿಶ್ವವಿದ್ಯಾನಿಲಯದಲ್ಲಿ ದ್ವಿತೀಯ ರ್ಯಾಂಕ್ ಪಡೆದ ಹಳೆ ವಿದ್ಯಾರ್ಥಿನಿ ಆಯಿಶತ್ತುಲ್ ಶಂಸೀರಾ ಅವರನ್ನು ಅಭಿನಂದಿಸಲಾಯಿತು.
ಆಡಳಿತ ಮಂಡಳಿ ಕಾರ್ಯದರ್ಶಿ ಡಾ.ಜಯಗೋವಿಂದ ಉಕಿನಡ್ಕ, ಪ್ರಿನ್ಸಿಪಾಲ್ ಡಾ. ಕಿಶೋರ್ ಕುಮಾರ್ ರೈ ಶೇಣಿ, ಸಿಬ್ಬಂದಿ ಕಾರ್ಯದರ್ಶಿ ಶಂಕರ್ ಖಂಡಿಗೆ, ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಮುಖ್ಯಸ್ಥ ಶ್ರೀನಿಧಿ ಅಭಿನಂದಿಸಿದರು.
ಕಾಮರ್ಸ್ ಮತ್ತು ಮ್ಯಾನೇಜ್ಮೆಂಟ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಸುರೇಶ್ ಕೆ.ಎಂ.ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ನಿವೇದಿತಾ ವಂದಿಸಿದರು. ಸಹಾಯಕ ಪ್ರಾಧ್ಯಾಪಕಿ ಅನುಷಾ ಸಿ.ಎಚ್.ನಿರೂಪಿಸಿದರು.