×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ಅನ್ವೇಷಣೆ-2015

ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ಇತ್ತೀಚೆಗೆ ‘ಅನ್ವೇಷಣೆ-2015’ ಎಂಬ ಹೆಸರಿನಲ್ಲಿ ಕಾಸರಗೋಡಿನ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹಲವು ಸ್ಪರ್ಧೆಗಳನ್ನು ನಡೆಸಲಾಯಿತು. ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಜಯಗೋವಿಂದ ಉಕ್ಕಿನಡ್ಕ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉಧ್ಘಾಟಿಸಿ, ನಮ್ಮ ಇಂದಿನ ಸ್ಪರ್ಧಾತ್ಮಕ ಬದುಕಿನಲ್ಲಿ ಇಂತಹ ಸ್ಪರ್ಧೆಗಳು ಅನಿವಾರ್ಯ, ಇದರ ಲಾಭವನ್ನು ಮಕ್ಕಳು ಪಡೆದುಕೊಂಡು ಬದುಕಿನಲ್ಲಿ ಮುಂದೆ ಬರಬೇಕು ಎಂದರು.

DSC01454

DSC01459

DSC01387

ಆಡಳಿತ ಮಂಡಳಿಯ ಖಜಾಂಜಿ ಶ್ರೀ ಗೋಪಾಲ ಚೆಟ್ಟಿಯಾರ್‌ರವರು ಅಧ್ಯಕ್ಷತೆಯನ್ನು ವಹಿಸಿ ಇಂದಿನ ವಿದ್ಯಾರ್ಥಿಗಳೇ ಮುಂದಿನ ಜನಾಂಗ, ನೀವು ಸತ್ಪ್ರಜೆಗಳಾದರೆ ಭಾರತ ಮಾತೆ ಧನ್ಯಳು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಕನ್ನಡ ಉಪನ್ಯಾಸಕರಾದ ಕೆ. ಕೇಶವ ಶರ್ಮ ಪ್ರಾಸ್ತಾವಿಕ ಮಾತುಗಳನ್ನು ಹೇಳಿ ಸ್ವಾಗತಿಸಿದರು. ಬೆಳಗ್ಗೆಯಿಂದ 9 ಗಂಟೆಯಿಂದ ಸಾಯಂಕಾಲದವರೆಗೆ ವಿವಿಧ ಸ್ಪರ್ಧೆಗಳು ನಡೆದವು. ಕಾಸರಗೋಡಿನ ಹಲವು ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಾಗವಹಿಸಿದರು.

ಸಮಾರೋಪ ಸಮಾರಂಭವು ಕಾಲೇಜಿನ ಆಡಳಿತಾಧಿಕಾರಿ ಶ್ರೀ ಕೆ. ಶಿವಕುಮಾರರ ಅಧ್ಯಕ್ಷತೆಯಲ್ಲಿ ನಡೆಯಿತು. ಕ್ಯಾಂಪ್ಕೊ ಉಪಾಧ್ಯಕ್ಷ ಹಾಗೂ ಕಾಲೇಜಿನ ಆಡಳಿತ ಸಮಿತಿಯ ನಿರ್ದೇಶಕರೂ ಆದ ಶಂ.ನಾ. ಖಂಡಿಗೆಯವರು ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನೆನಪಿನ ಕಾಣಿಕೆಗಳನ್ನು ಕೊಟ್ಟು ವಿಜೇತರನ್ನು ಪ್ರೋತ್ಸಾಹಿಸಿದರು. ನಿವೃತ್ತ ಚಿತ್ರಕಲಾ ಅಧ್ಯಾಪಕರಾದ ಶ್ರೀ ಪರಮೇಶ್ವರ ಹೆಬ್ಬಾರ್ ಮತ್ತು ಆಡಳಿತ ಮಂಡಳಿಯ ಸದಸ್ಯೆ, ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪ್ರಭಾವತಿ ಟೀಚರ್‌ರವರು ಮಕ್ಕಳಿಗೆ ಶುಭ ಹಾರೈಸಿದರು. ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಶುಭಾರಂಭಗೊಂಡ ಈ ಕಾರ್ಯಕ್ರಮಕ್ಕೆ ಮಲಯಾಳ ಉಪನ್ಯಾಸಕಿ ಶ್ರೀಮತಿ ಜ್ಯೋತಿ ಸ್ವಾಗತ ಬಯಸಿದರು. ಹಿಂದಿ ಉಪನ್ಯಾಸಕಿ ಶ್ರೀಮತಿ ಶಾಂಭವಿ ವಂದನಾರ್ಪಣೆಗೈದರು. ಉಪನ್ಯಾಸಕರಾದ ಶ್ರೀ ಜನಾರ್ಧನ ಹಾಗೂ ಶ್ರೀ ಸತೀಶ್ ಕಾರ್ಯಕ್ರಮ ನಿರೂಪಿಸಿದರು.