ಕಾಲೇಜು ಅರ್ಥಶಾಸ್ತ್ರ ವಿಭಾಗದ ನೇತೃತ್ವದಲ್ಲಿ ವಿಶ್ವ ಜನಸಂಖ್ಯಾ ದಿನ ಆಚರಿಸಲಾಯಿತು.ಶೇಣಿ ಶ್ರೀ ಶಾರದಾಂಬ ಹೈಯರ್ ಸೆಕೆಂಡರಿ ಶಾಲೆಯ ಗಣಿತ ಶಿಕ್ಷಕ ಡಾ.ಅನಿಶ್ ಕುಮಾರ್ ಪಿ.ಆರ್.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ ಜನಸಂಖ್ಯೆ ಹೆಚ್ಚಳದ ದುಷ್ಪರಿಣಾಮ ಹಾಗೂ ನಿಯಂತ್ರಣದ ಅಗತ್ಯದ ಕುರಿತು ಮಾಹಿತಿ ನೀಡಿದರು.
ಕಾಲೇಜು ಸ್ಟುಡೆಂಟ್ ವೆಲ್ ಫೇರ್ ಆಫೀಸರ್ ಕೇಶವ ಶರ್ಮಾ ಅಧ್ಯಕ್ಷತೆ ವಹಿಸಿದ್ದರು.ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶಂಕರ ಖಂಡಿಗೆ ಸ್ವಾಗತಿಸಿದರು. ಉಪನ್ಯಾಸಕಿ ಅನುಪಮ ವಂದಿಸಿದರುಜುಲೈಕತ್ ರಫಿಯಾ ನಿರೂಪಿಸಿದರು.