ಕಾಲೇಜಿನ ಹಿರಿಯ ಕನ್ನಡ ಪ್ರಾಧ್ಯಾಪಕರಾದ ಶ್ರೀ ಕೇಶವ ಶರ್ಮ ಇವರಿಗೆ ಸನ್ಮಾನಿಸುವುದರ ಮೂಲಕ ಬೀಳ್ಕೊಡುಗೆ ಸಮಾರಂಭ ನಡೆಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜು ಪ್ರಾಂಶುಪಾಲರಾದ ಶ್ರೀ ಶಂಕರ ಖಂಡಿಗೆ ಅವರು ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಗೌರವ ಸಲಹೆಗಾರರಾದ ಶ್ರೀ ಸುಬ್ರಹ್ಮಣ್ಯ ಭಟ್ ಕಜಂಪಾಡಿ ಇವರು ಶುಭಸಂಶನೆ ಗೈದರು. ಈ ಹಿಂದೆ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿದ್ದ ಡಾ. ಕೆ ಕಮಲಾಕ್ಷ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಆಡಳಿತ ಮಂಡಳಿ ಸದಸ್ಯ ಶ್ರೀ ರಾಜಶೇಖರ್ ಪೆರ್ಲ ಇವರು ವಂದಿಸಿದರು. ವಾಣಿಜ್ಯ ವಿಭಾಗದ ಸಹಾಯಕ ಉಪನ್ಯಾಸಕರಾದ ಶ್ರೀ ಶ್ರೀನಿಧಿ ಕೆ ಕಾರ್ಯಕ್ರಮವನ್ನು ಸಂಯೋಜಿಸಿದರು. ಎಲ್ಲಾ ಆಡಳಿತ ಮಂಡಳಿ ಸದಸ್ಯರು, ಅಧ್ಯಾಪಕ ಹಾಗೂ ಸಿಬ್ಬಂದಿ ವೃಂದದವರು ಉಪಸ್ಥಿತರಿದ್ದರು.