ಪೆರ್ಲ : ನಾಲಂದ ಮಹಾವಿದ್ಯಾಲಯದ ಎನ್.ಎನ್.ಎಸ್ ಘಟಕವು ಪ್ರಜಾಪ್ರಭುತ್ವ ದಿನವನ್ನು ಆಚರಿಸಿತು. ಉಪನ್ಯಾಸಕಿ ಮಧುರವಾಣಿಯವರು ಪ್ರಜಾಪ್ರಭುತ್ವದ ಮಹತ್ವವನ್ನು ತಿಳಿಸುತ್ತಾ ಪ್ರಪಂಚ ಯುದ್ಧ ಮುಕ್ತವಾದರೆ ಪ್ರತಿಯೊಬ್ಬನೂ ಶಾಂತಿ, ಸಮಾಧಾನದಿಂದ ಬದುಕಬಹುದು. ಅದರ ಮೂಲಕ ದೇಶದ ಅಭಿವೃದ್ಧಿಯಾಗುತ್ತದೆ. ಹಿಂಸೆಯಿಂದ ಏನನ್ನೂ ಗಳಿಸಲಾರೆವು ಪ್ರೀತಿಯಿಂದ ಎಲ್ಲವನ್ನೂ ಸಾಧಿಸಬಹುದು ಎಂಬುದನ್ನು ನೆನಪಿಸುವುದೇ ಪ್ರಜಾಪ್ರಭುತ್ವ ದಿನದ ಉದ್ದೇಶ. ಪ್ರತಿಯೊಬ್ಬ ಪ್ರಜೆಯೂ ಮತದಾನದ ಮಹತ್ವವನ್ನು ಅರಿತುಕೊಂಡಿರಬೇಕು ಉತ್ತಮ ನಾಯಕನ ಆಯ್ಕೆಯಾಗಬೇಕು. ಆ ಮೂಲಕ ಮಹಿಳಾ ಸಬಲೀಕರಣ ನಡೆಯಬೇಕು ಎಂದರು.
ಸಭೆಯ ಅಧ್ಯಕ್ಷತೆಯನ್ನು ಎನ್.ಎಸ್.ಎಸ್ ಯೋಜನಾಧಿಕಾರಿ ಉಪನ್ಯಾಸಕ ಶಂಕರ ಖಂಡಿಗೆಯವರು ವಹಿಸಿದರು. ವಿದ್ಯಾರ್ಥಿನಿ ರಾಜಿ ಸ್ವಾಗತಿಸಿ ರಂಜಿನಿ ವಂದಿಸಿದರು. ಪವಿತ್ರ ಕಾರ್‍ಯಕ್ರಮ ನಿರೂಪಿಸಿದರು.