×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ಯೋಗದಿಂದ ಅಂತರಂಗ – ಬಹಿರಂಗ ಶುದ್ಧಿ

ವಿಶ್ವ ಯೋಗ ದಿನಾಚರಣೆ ಅಂಗವಾಗಿ ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ನಡೆದ ’ಯೋಗ ದಿನ – 2019’ ವಿಶೇಷ ಕಾರ್ಯಕ್ರಮದಲ್ಲಿ ಡಾ.ಮಹಾಬಲ ಭಟ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಪಂಚೇಂದ್ರಿಯಗಳ ನಿಗ್ರಹ, ಅಂತರಂಗ- ಬಹಿರಂಗ ಶುದ್ಧಿಗೊಳಿಸುವ, ದೇಹ ಮತ್ತು ಮನಸ್ಸಿಗೆ ಚೈತನ್ಯ ನೀಡುವ ಯೋಗವನ್ನು ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವ ಮುಖಾಂತರ ಆರೋಗ್ಯಕರ ಜೀವನ ಸಾಗಿಸಲು ಸಾಧ್ಯ ಎಂದು ಪುತ್ತೂರು, ಮಂಗಳೂರು ಯೋಗಾರೋಗ್ಯ ಮತ್ತು ಯೋಗವಸಿಷ್ಟ ಯೋಗ ತೆರಪಿ ನಿರ್ದೇಶಕ ಡಾ.ಮಹಾಬಲ ಭಟ್ ಹೇಳಿದರು.

Yoga-mahabala-bhat

Yogaaa

Yoga-day

ಯೋಗ ವಿದ್ಯಾರ್ಥಿಗಳಲ್ಲಿ ಜ್ಞಾಪಕ ಶಕ್ತಿ ಹೆಚ್ಚಿಸಿ, ಶಿಸ್ತು, ಶಾರೀರಿಕ ದೃಢತೆ, ಏಕಾಗ್ರತೆ, ಸ್ಮರಣಶಕ್ತಿಯನ್ನು ಬೆಳೆಸುತ್ತದೆ ಎಂದರು. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಯೋಗವನ್ನು ತಮ್ಮ ಜೀವನದಲ್ಲಿ ಅಳವಡಿಕೊಳ್ಳಲು ಪ್ರಯತ್ನಿಸಬೇಕು ಎಂದರು.

ನಾಲಂದ ಕಾಲೇಜು ಆಡಳಿತ ಮಂಡಳಿ ಖಜಾಂಜಿ ಗೋಪಾಲ ಚೆಟ್ಟಿಯಾರ್ ಮಾತನಾಡಿ, ವಿಶ್ವಕ್ಕೆ ಯೋಗವನ್ನು ಪರಿಚಯಿಸಿರುವ ಹೆಗ್ಗಳಿಕೆಯನ್ನು ಭಾರತ ಹೊಂದಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತದ ಕೀರ್ತಿ ಹೆಚ್ಚಿಸಲು, ಭಾರತವನ್ನು ವಿಶ್ವ ಗುರುವಿನ ಸ್ಥಾನಕ್ಕೆ ಏರಿಸಲು ಸಹಕಾರಿಯಾಗಿದೆ. ಪ್ರತಿವರ್ಷ ಯೋಗ ದಿನಾಚರಣೆಯ ಮೂಲಕ ಯೋಗದ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ನಾಲಂದ ಕಾಲೇಜು ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಮಾತನಾಡಿ, ಯೋಗಾಸನ ಒಂದು ದಿನಕ್ಕೆ ಮಾತ್ರ ಸೀಮಿತವಾಗದೇ, ನಿರಂತರ ಪ್ರಕ್ರಿಯೆ ಆದಾಗ ಯೋಗ ದಿನಾಚರಣೆ ಸಾರ್ಥಕತೆ ಪಡೆದುಕೊಳ್ಳುತ್ತದೆ. ಯೋಗ ದೈನಂದಿನ ಜೀವನ ಕ್ರಮವಾದಾಗ ಮನಸ್ಸನ್ನು ಹತೋಟಿಯಲ್ಲಿರಿಸಲು ಸಾಧ್ಯ, ತನ್ಮೂಲಕ ಶರೀರವನ್ನು ಹತೋಟಿಲ್ಲಿಡಲು ಸಾಧ್ಯ ಎಂದರು.

ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ ಎಂ. ಸ್ವಾಗತಿಸಿ, ವಿದ್ಯಾರ್ಥಿನಿ ಕವಿತಾ ವಂದಿಸಿದರು. ದೀಕ್ಷ ನಿರೂಪಿಸಿದರು.