ಬದಿಯಡ್ಕ: ಅಗಲ್ಪಾಡಿ ಶ್ರೀ ಅನ್ನಪೂರ್ಣೇಶ್ವರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದ ನಾಲಂದ ಕಾಲೇಜು ಎನ್ನೆಸ್ಸೆಸ್ ಘಟಕದ ಸಪ್ತದಿನ ಎನ್ನೆಸ್ಸೆಸ್ ಶಿಬಿರದ ಯಶಸ್ಸಿನ ಹಿಂದಿರುವ ವ್ಯಕ್ತಿ, ಎನ್ನೆಸ್ಸೆಸ್ ಯೋಜನಾಧಿಕಾರಿ ಸುರೇಶ್ ಕೆ. ಎಂ. ಅವರನ್ನು ಶಿಬಿರಾರ್ಥಿಗಳ ವತಿಯಿಂದ ಸನ್ಮಾನಿಸಲಾಯಿತು.
ನಾಲಂದ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಗೋಪಾಲ ಚೆಟ್ಟಿಯಾರ್ ಶಾಲು ಹೊದಿಸಿ, ಕಾರ್ಯಕ್ರಮದ ಉದ್ಘಾಟಕ ಕಾಸರಗೋಡು ಜಿಲ್ಲಾ ಪಂಚಾಯತಿ ಸದಸ್ಯ ಅಡ್ವ. ಕೆ. ಶ್ರೀಕಾಂತ್ ಸ್ಮರಣಿಕೆ ನೀಡಿ, ಅಧ್ಯಕ್ಷತೆ ವಹಿಸಿದ ಕಾಲೇಜು ಪ್ರಾಂಶುಪಾಲ ಡಾ. ವಿಘ್ನೇಶ್ವರ ವರ್ಮುಡಿ ಹಣ್ಣುಹಂಪಲು ನೀಡಿ ಸನ್ಮಾನಿಸಿದರು.