ನಾಲಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಭಿತ್ತಿ ಪತ್ರಿಕೆ ” ಇಕೋ – ಝೋನ್” ಇದರ ಉದ್ಘಾಟನಾ ಕಾರ್ಯಕ್ರಮ ಹಾಗೂ ಸ್ವ ಉದ್ಯೋಗದ ಕುರಿತು ಮಾಹಿತಿ ಕಾರ್ಯಗಾರ ಕಾಲೇಜು ಸಭಾಂಗಣದಲ್ಲಿ ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಶ್ರೀ ಪ್ರಭಾಕರನ್ ನಾಯರ್ ಎಚ್. ಎಸ್. ಎಸ್. ಟಿ. ಪೆರಡಾಲ ಭಿತ್ತಿ ಪತ್ರಿಕೆ ಉದ್ಘಾಟಿಸಿ, ನಂತರ ಸ್ವ ಉದ್ಯೋಗದ ಪ್ರಾಮುಖ್ಯತೆ ಕುರಿತು ವಿದ್ಯಾರ್ಥಿಗಳಿಗೆ ಅರ್ಥಪೂರ್ಣವಾಗಿ ವಿವರಿಸಿದರು. ಕಾಲೇಜು ಪ್ರಾಂಶುಪಾಲರಾದ ಡಾ. ಕಿಶೋರ್ ಕುಮಾರ್ ರೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ. ಜಯಗೋವಿಂದ ಉಕ್ಕಿನಡ್ಕ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಧಿಕಾರಿ ಶ್ರೀ ಕೇಶವ ಶರ್ಮ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಶ್ರೀ ಶಂಕರ ಕೆ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಅರ್ಥಶಾಸ್ತ್ರ ಉಪನ್ಯಾಸಕಿಯರಾದ ಶ್ರೀಮತಿ ಅಮೃತಾ ಚಿ ಹಾಗೂ ಶ್ರೀಮತಿ ಅನುಪಮ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಧನ್ಯಶ್ರಿ ಎಂ ವಂದಿಸಿದರು. ಚೈತನ್ಯ ಎಂ. ಕಾರ್ಯಕ್ರಮ ನಿರೂಪಿಸಿದರು.