ವಿವೇಕಾನಂದ ಶಿಶುಮಂದಿರದಲ್ಲಿ ಜೂನ್ 5ರಂದು ವಿಶ್ವ ಪರಿಸರ ದಿನದ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮವು ನಡೆಯಿತು.ನಾಲಂದ ಮಹಾವಿದ್ಯಾಲಯದ ಉಪ ಪ್ರಾಂಶುಪಾಲರಾದ ಶ್ರೀಯುತ ಕೇಶವ ಶರ್ಮ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಜಾಗೃತಿಯನ್ನು ಉಂಟುಮಾಡಿದರು. ವಿವೇಕಾನಂದ ಶಿಶುಮಂದಿರದ ಅಧ್ಯಕ್ಷೆ ಶ್ರೀಮತಿ ನಳಿನಿ ಸೈಪಂಗಲ್ಲು, ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.