×
Nalanda College
Nalanda College of Arts & Science

Nalanda College of Arts & Science

A unit of : Vivekananda VidyaVardhaka Sangha Puttur (R)

ನಾಲಂದದಲ್ಲಿ ಮತದಾನದ ಬಗ್ಗೆ ಜಾಗೃತಿ

ಕೇರಳದಲ್ಲಿ 16 ಮೇ 2016 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಬಗ್ಗೆ ‘ಜಾಗೃತಿ’ಯನ್ನು ಮೂಡಿಸುವ ಉದ್ದೇಶದಿಂದ ಕಣ್ಣೂರು ವಿಶ್ವವಿದ್ಯಾಲಯದ ಆದೇಶದಂತೆ ಪೆರ್ಲ ನಾಲಂದ ಮಹಾವಿದ್ಯಾಲಯದ ಮುಂದಾಳತ್ವದಲ್ಲಿ ದಿನಾಂಕ 31 ಮಾರ್ಚ್ 2016 ರಂದು ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವೊಂದು ಪೆರ್ಲದ ನಾಲಂದ ಮಹಾವಿದ್ಯಾಲಯದಲ್ಲಿ ನಡೆಯಿತು.

DSC_0167

DSCN1133

ಭಾರತೀಯ ಪ್ರಜೆಗಳಾದ ನಾವು ಪ್ರಜಾಪ್ರಭುತ್ವದಲ್ಲಿ ವಿಶ್ವಾಸ ಉಳ್ಳವರು, ಅದರ ಮೌಲ್ಯಗಳನ್ನು ಎತ್ತಿ ಹಿಡಿಯುವುದರೊಂದಿಗೆ ಜಾತಿ, ಮತ, ವರ್ಗ ಭೇದವಿಲ್ಲದೆ ಯಾವುದೇ ಆಮಿಷಗಳಿಗೊಳಗಾಗದೆ ಮೇ 16 ರಂದು ನಡೆಯವ ಚುನಾವಣೆಯಲ್ಲಿ ಮತವನ್ನು ಚಲಾಯಿಸುತ್ತೇವೆ ಎಂಬ ಪ್ರತಿಜ್ಞೆಗೆ ವಿದ್ಯಾರ್ಥಿ ಮತದಾರರು ಬದ್ಧರಾದರು. ವಿದ್ಯಾಲಯದ ಸಂಖ್ಯಾಶಾಸ್ತ್ರ ವಿಭಾಗದ ಉಪನ್ಯಾಸಕ ಕೆ. ಅನೀಶ್ ಕುಮಾರ್‌ರವರು ಪ್ರಜಾಪ್ರಭುತ್ವದ ಮತ್ತು ಮತದ ಮಹತ್ವಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ವಿದ್ಯಾಲಯದ ಎಲ್ಲಾ ಉಪನ್ಯಾಸಕರು, ಸಿಬಂಧಿ ವರ್ಗದವರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.