ವಿದ್ಯಾರ್ಥಿಗಳಿಗೆ ಒಂದು ದಿನದ ಕೆಸರು ಗದ್ದೆ ಕ್ರೀಡಾಕೂಟವನ್ನು ಬಜಕೂಡ್ಲು ಗದ್ದೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಉದಯ ಚೆಟ್ಟಿಯಾರ್ (ಅಮೃತದೀಪದ ಸಂಚಾಲಕರು ) ನೆರವೇರಿಸಿದರು.
ಮುಖ್ಯ ಅತಿಥಿಯಾಗಿ ಶ್ರೀ ಪ್ರಕಾಶ್ ಶೆಟ್ಟಿ ಕುಧ್ವ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಆಡಳಿತ ಮಂಡಳಿ ಸದಸ್ಯರಾದ ಶ್ರೀ ರಾಜಶೇಖರ ಪೆರ್ಲ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜು ಪ್ರಾoಶುಪಾಲ ಶ್ರೀ ಸುರೇಶ ಕೆ ಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಪ್ರಾಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಸಭಾ ಕಾರ್ಯಕ್ರಮದ ನಂತರ ಕಾಲೇಜು ವಿದ್ಯಾರ್ಥಿಗಳಿಗೆ ಸ್ಪರ್ಧೆಗಳನ್ನು ಆಯೋಜಿಸಲಾಯಿತು.