ಪೆರ್ಲ ನಾಲಂದ ಮಹಾವಿದ್ಯಾಲಯದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಯೋಗ ತರಗತಿಯ ಸಂಯೋಜಕರು ಆದ ಯೋಗಗುರು ಬಿ. ಜಯರಾಮ ಅವರು ಇತ್ತೀಚೆಗೆ ಯೋಗದ ಪ್ರಾತ್ಯಕ್ಷಿಕೆಯನ್ನು ನೀಡಿದರು. ರಾಷ್ಟ್ರೀಯ ಸೇವಾ ಯೋಜನೆಯ ನೇತೃತ್ವದಲ್ಲಿ ಈ ತರಗತಿ ನಡೆಯಿತು. ಯೋಗ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಕಾಲೇಜಿನ ಆಡಳಿತಾಧಿಕಾರಿ ಶಿವಕುಮಾರ್ ದೀಪ ಬೆಳಗಿಸಿ ಉದ್ಘಾಟಿಸಿದರು. ಯೋಗ ಮನುಷ್ಯನ ಶಾರೀರಿಕ, ಮಾನಸಿಕ ಸ್ವಾಸ್ಥ್ಯಕ್ಕೆ ಸಹಕರಿಸುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಯೋಗ ಗುರುಗಳು ಒಂದು ದಿನದ ಯೋಗ ಪ್ರಾತ್ಯಕ್ಷಿಕೆಯನ್ನು ವಿವಿಧ ತರಗಳ ವಿದ್ಯಾರ್ಥಿ ಬಳಗಕ್ಕೆ ನೀಡಿದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಅಶೋಕ ಮೊಟ್ಟಕುಂಜ, ಯೋಗಾಭ್ಯಾಸ ಆರೋಗ್ಯಕ್ಕೆ ಉತ್ತಮ ಮತ್ತು ಶಾರೀರಿಕ ಆರೋಗ್ಯ, ಮಾನಸಿಕ ಶಾಂತಿ ಕಾಪಾಡುವಲ್ಲಿ ಯೋಗಾಭ್ಯಾಸ ಸಹಕರಿಸುತ್ತದೆ ಎಂದು ತಮ್ಮ ಸ್ವಾಗತ ಭಾಷಣದಲ್ಲಿ ಹೇಳಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಹಾಗು ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಶಂಕರ ಖಂಡಿಗೆ ವಂದಿಸಿದರು. ವಿದ್ಯಾರ್ಥಿಗಳಾದ ವಿಕಾಸ್, ಸುಧಾಕರ, ಅಭಿಲಾಷ್ ಮತ್ತು ಅರ್ಪಿತ್ ಕಾರ್ಯಕ್ರಮಕ್ಕೆ ಸಹಕರಿಸಿದರು.