ಪೆರ್ಲ ನಾಲಂದ ಮಹಾವಿದ್ಯಾಲಯದ ಗ್ರಾಮವಿಕಾಸ ಯೋಜನೆಯ ಅಂಗವಾಗಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರು ಅಕ್ಟೋಬರ್ 28 ರಂದು ಸ್ವರ್ಗ ಸ್ವಾಮಿ ವಿವೇಕಾನಂದ ಎ.ಯು.ಪಿ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರವನ್ನು ನಡೆಸಿಕೊಟ್ಟರು. ಸ್ವರ್ಗ ಶಾಲೆಯ ವ್ಯವಸ್ಥಾಪಕ ಹೃಷಿಕೇಶ ಭಟ್ರವರು ದೀಪ ಬೆಳಗಿಸಿ ಶಿಬಿರವನ್ನು ಉದ್ಘಾಟಿಸಿದರು.
ಕೆ.ಎಂ.ಸಿ ಆಸ್ಪತ್ರೆ ವೈದ್ಯಾಧಿಕಾರಿ ಡಾ| ಹರ್ಬಟ್ ವೈದ್ಯಕೀಯ ಶಿಬಿರದಲ್ಲಿ ಮಕ್ಕಳ ಚಿಕಿತ್ಸೆ, ಸ್ತ್ರೀರೋಗ ಚಿಕಿತ್ಸೆ, ಕಣ್ಣಿನ ಚಿಕಿತ್ಸೆ, ಎಲುಬು ಮತ್ತು ಕೀಲು ಚಿಕಿತ್ಸೆ, ಮಧುಮೇಹ ಮತ್ತು ರಕ್ತದೊತ್ತಡ ತಪಾಸಣೆಗಳನ್ನು ನಡೆಸಿ ಸೂಕ್ತ ಮಾಹಿತಿಗಳನ್ನು ಮಾತ್ರವಲ್ಲದೆ ಲಭ್ಯ ಔಷಧಿಗಳನ್ನು ವಿತರಿಸಲಿದ್ದೇವೆ. ಇದರ ಪೂರ್ಣ ಪ್ರಯೋಜನವನ್ನು ಪಡೆದುಕೊಳ್ಳಿ ಎಂದರು. ಅದಲ್ಲದೆ ಕೆ.ಎಂ.ಸಿ ಆಸ್ಪತ್ರೆ ಬಡವರಿಗೆ ನೀಡುವ ಸವಲತ್ತುಗಳನ್ನು ತಿಳಿಸಿದರು. ಗ್ರಾಮವಿಕಾಸ ಯೋಜನೆಯ ಸಮಿತಿಯ ಅಧ್ಯಕ್ಷ ಕೆ.ವೈ. ಸುಬ್ರಹ್ಮಣ್ಯ ಭಟ್ ಕೆ.ಎಂ.ಸಿ ಆಸ್ಪತ್ರೆ ವೈದ್ಯಾಧಿಕಾರಿಗಳಿಗೆ ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿದರು.
ಕಾಲೇಜಿನ ಆಡಳಿತಾಧಿಕಾರಿ ಕೆ.ಶಿವಕುಮಾರ್ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಶ್ಯಾಮಲಾ ಪತ್ತಡ್ಕ ವಂದಿಸಿದರು. ಕಾಲೇಜು ವಿದ್ಯಾರ್ಥಿನಿಯರಾದ ರೂಪ ಮತ್ತು ರಶ್ಮಿ ಪ್ರಾರ್ಥಿಸಿದರು. ಉಪನ್ಯಾಸಕ ಕಿಶನ್ ಕಾರ್ಯಕ್ರಮ ನಿರೂಪಿಸಿದರು. ಸುಮಾರು ೨೫೦ ಕ್ಕೂ ಹೆಚ್ಚು ಜನ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು.